

Rishab Shetty : ಭಾರತ ಚಿತ್ರರಂಗದಲ್ಲಿಯೇ ಅದ್ಭುತವಾಗಿ ಹೊರಹೊಮ್ಮಿರುವ ರಿಷಬ್ ಶೆಟ್ಟಿ (Rishab Shetty) ಅವರ ಕಾಂತಾರ ಸಿನಿಮಾಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು ಸಿನಿಮಾಗೆ ಪಾಸಿಟಿವ್ ರೆಸ್ಪಾನ್ಸ್ ವಿಶ್ವದೆಲ್ಲೆಡೆ ಮೂಡಿದೆ.
ಇದೀಗ ಖುಷಿಯ ಸುದ್ದಿ ಎಂದರೆ ಕಾಂತಾರ ನಟ ರಿಷಬ್ ಶೆಟ್ಟಿ ಅವರು ದಾದಾ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಸಮಾರಂಭದ ಬಳಿಕ ಬೆಂಗಳೂರಿಗೆ ಆಗಮಿಸಿದ ರಿಷಬ್ ಶೆಟ್ಟಿ ಮಾರ್ಚ್ ನಿಂದ ಫೋನ್ ಆಫ್ ಮಾಡುವುದಾಗಿ ಒಂದು ಸಾರಿ ಅಭಿಮಾನಿಗಳನ್ನು ಗಾಬರಿ ಗೊಳಿಸಿದ್ದಾರೆ.
ಫೆಬ್ರವರಿ 20ರಂದು ಮುಂಬೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ರಿಷಬ್ ಶೆಟ್ಟಿ ಎಲ್ಲರ ಗಮನ ಸೆಳೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದು, ಮುಂಬೈನಲ್ಲಿ ಪ್ರಶಸ್ತಿ ಸ್ವೀಕರಿಸಿ ಬೆಂಗಳೂರಿಗೆ ಆಗಮಿಸಿದ ರಿಷಬ್ ಅವರು ಅಭಿಮಾನಿಗಳ ಮುಂದೆ ಸಂತಸ ವ್ಯಕ್ತ ಪಡಿಸಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ರಿಷಬ್, ಹಿಂದಿ ಸಿನಿಮಾಗೆ ಕೊಟ್ಟ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿ ಸಿಕ್ಕಿದ್ದು ತುಂಬಾ ಖುಷಿ ಆಗಿದೆ. ದಾದಾ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ ಇದರಿಂದ ನನ್ನ ಜವಾಬ್ಧಾರಿ ಹೆಚ್ಚಾಗಿದೆ. ಕನ್ನಡ ಸಿನಿಮಾಗಳ ಬಗ್ಗೆ ಹೆಚ್ಚಿನ ಗೌರವ ಜನರಲ್ಲಿ ಮೂಡಿದ್ದು ಹೆಮ್ಮೆಯ ವಿಚಾರವಾಗಿದೆ ಎಂದಿದ್ದಾರೆ.
ಪ್ರಶಸ್ತಿ ಬಗ್ಗೆ ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲೂ ಬರೆದುಕೊಂಡಿದ್ದರು. ಕಾಂತಾರ ಇಡೀ ತಂಡದಿಂದ ಇದು ಸಾಧ್ಯವಾಗಿದ್ದು ಹಾಗಾಗಿ ಪ್ರತಿಯೊಬ್ಬ ಕಲಾವಿದರು ಮತ್ತು ತಂತ್ರಜ್ಞರಿಗೆ ಈ ಪ್ರಶಸ್ತಿಯನ್ನು ಅರ್ಪಿಸುವೆ. ಜೊತೆಗೆ ಈ ಪ್ರಶಸ್ತಿಯನ್ನು ದೈವ ನರ್ತಕರು, ಕರ್ನಾಟಕದ ಜನತೆ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಭಗವಾನ್ ಸರ್‌ಗೆ ಅರ್ಪಿಸುವೆ ಎಂದು ಬರೆದುಕೊಂಡಿದ್ದಾರೆ.
ನಂತರ ಕಾಂತಾರ 2 ಬಗ್ಗೆಯೂ ಬಹಿರಂಗ ಪಡಿಸಿದ್ದು, ಮಾರ್ಚ್ ನಿಂದನೇ ಕಾಂತಾರ-2 ಪ್ರಾರಂಭವಾಗಲಿದೆ ಎಂದು ಬಹಿರಂಗ ಪಡಿಸಿದರು. ಅದೇ ಸಮಯದಲ್ಲಿ ‘ಇನ್ಮುಂದೆ ಕಾಂತಾರ 2 ಕೆಲಸ ಶುರು ಮಾಡುತ್ತೇನೆ. ಮಾರ್ಚ್ ನಿಂದ ಫೋನ್ ಆಫ್ ಮಾಡುತ್ತೇನೆ’ ಎಂದು ರಿಷಬ್ ಹೇಳಿದರು.
ಇನ್ನು ರಿಷಬ್ ಶೆಟ್ಟಿ ಎಲ್ಲೇ ಹೋದರು ಯಾವುದೇ ಕಾರ್ಯಕ್ರಮಕ್ಕೆ ಹಾಜರಾದರು ಪಂಚೆಯಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವದ ಪ್ರಶಸ್ತಿ ಪಡೆಯುವಾಗಲೂ ರಿಷಬ್ ಪಂಚೆಯಲ್ಲೇ ಕಾಣಿಸಿಕೊಂಡಿದ್ದು ಅವರ ಸರಳತೆಯನ್ನು ಎತ್ತಿ ಹಿಡಿಯುತ್ತದೆ. ಇದು ಅವರ ಸಂಪ್ರದಾಯಿಕತೆಯ ವಿಶೇಷತೆಯೂ ಹೌದು.













