Home Breaking Entertainment News Kannada ಕತ್ರಿನಾ ಕೈಫ್ ಲೈಫ್ ಪಾರ್ಟ್ನರ್ ಆಯ್ಕೆ ಕುರಿತು ಹಾಡಿ ಹೊಗಳಿದ ಕಂಗನಾ | ಯಶಸ್ವಿ ಮಹಿಳೆಯರು...

ಕತ್ರಿನಾ ಕೈಫ್ ಲೈಫ್ ಪಾರ್ಟ್ನರ್ ಆಯ್ಕೆ ಕುರಿತು ಹಾಡಿ ಹೊಗಳಿದ ಕಂಗನಾ | ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ಮದುವೆ ಆಗುವುದೇ ಖುಷಿಯ ವಿಚಾರ ಎಂದ ಬಾಲಿವುಡ್ ಬೆಡಗಿ

Hindu neighbor gifts plot of land

Hindu neighbour gifts land to Muslim journalist

ಸಾಮಾನ್ಯವಾಗಿ ಕಂಗನಾ ರಣಾವತ್​ ಸುದ್ದಿ ಆಗುವುದೇ ಕಾಂಟ್ರವರ್ಸಿಗಳ ಮೂಲಕ. ಅದರ ನಡುವೆ ಅವರು ಯಾರನ್ನಾದರೂ ಹೊಗಳುತ್ತಾರೆ ಎಂದರೆ ಸ್ವಲ್ಪ ಅಚ್ಚರಿ ಆಗುವುದು ಸಹಜ. ಹಾಗೆಯೇ ಇದೀಗ ಹೊಸ ಜೀವನಕ್ಕೆ ಕಾಲಿಡುತ್ತಿರುವ ಕತ್ರಿನಾ ಕೈಫ್ ಬಗ್ಗೆ ಕಂಗನಾ ಮಾತನಾಡಿದ್ದಾರೆ.

ಶ್ರೀಮಂತ ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ಮದುವೆ ಆಗುತ್ತಿರುವುದು ನೋಡಲು ಖುಷಿ ಆಗುತ್ತದೆ ಎಂದು ಕಂಗನಾ ರಣಾವತ್ ಅವರು ತಮ್ಮ ಇನ್ಸ್ಟಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ.

ಯಶಸ್ವಿ ಪುರುಷರು ವಯಸ್ಸಿನಲ್ಲಿ ತಮಗಿಂತ ತುಂಬ ಕಿರಿಯರಾದ ಮಹಿಳೆಯರ ಜೊತೆ ಮದುವೆ ಆದ ಕಥೆಗಳನ್ನು ಕೇಳುತ್ತಾ ನಾವು ಬೆಳೆದೆವು. ಗಂಡನಿಗಿಂತ ಹೆಂಡತಿಯೇ ಹೆಚ್ಚು ಸಾಧನೆ ಮಾಡಿದರೆ ಅದನ್ನು ಮಹಿಳೆಯರ ಪಾಲಿಗೆ ಒಂದು ಬಿಕ್ಕಟ್ಟಿನ ರೀತಿ ನೋಡಲಾಗುತ್ತಿತ್ತು.

‘ಚಿಕ್ಕ ವಯಸ್ಸಿನ ಹುಡುಗರನ್ನು ಮದುವೆ ಮಾಡಿಕೊಳ್ಳುವುದು ಹಾಗಿರಲಿ, ಒಂದು ವಯಸ್ಸು ದಾಟಿದ ನಂತರ ಮಹಿಳೆಯರು ಮದುವೆ ಆಗುವುದೇ ಅಸಾಧ್ಯವಾಗಿತ್ತು. ಆದರೆ ಈಗ ಭಾರತೀಯ ಶ್ರೀಮಂತ ಮಹಿಳೆಯರು, ಯಶಸ್ವಿ ನಟಿಯರು ಆ ಎಲ್ಲ ಹಳೆಯ ನಿಯಮಗಳನ್ನು ಮುರಿಯುತ್ತಿರುವುದು ನೋಡಲು ಖುಷಿ ಆಗುತ್ತದೆ. ಲಿಂಗ ಸಮಾನತೆ ಬಗೆಗಿನ ದೃಷ್ಟಿಕೋನ ಬದಲಿಸುತ್ತಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಅಭಿನಂದನೆಗಳು’ ಎಂದು ಕಂಗನಾ ಬರೆದುಕೊಂಡಿದ್ದಾರೆ.

ನಟಿ ಕತ್ರಿನಾ ಕೈಫ್ ಇಂದು ರಾಜಸ್ಥಾನದ ರಾಜಮನೆತನದ ಕೋಟೆಯಲ್ಲಿ ನಟ ವಿಕ್ಕಿ ಕೌಶಲ್​ರನ್ನು ವಿವಾಹವಾಗಲಿದ್ದಾರೆ. ಇವರಿಬ್ಬರು ಸ್ನೇಹಿತರು, ಕುಟುಂಬದವರ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ. ಇತ್ತೀಚೆಗಷ್ಟೇ ಕಂಗನಾ ಕೂಡ ಶೀಘ್ರದಲ್ಲೇ ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಬಾಲಿವುಡ್‌ ತಾರೆಯರಾದ ಐಶ್ವರ್ಯಾ ರೈ, ಪ್ರಿಯಾಂಕಾ ಚೋಪ್ರಾ, ಅನುಷ್ಕಾ ಶರ್ಮಾ ಅವರು ತಮಗಿಂತ ಕಿರಿಯ ವಯಸ್ಸಿನ ಪುರುಷರನ್ನು ಮದುವೆಯಾಗಿದ್ದಾರೆ.