Home Breaking Entertainment News Kannada ICC World Cup 2023: ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಕುತೂಹಲಕಾರಿ ಇಂಡೋ ಪಾಕ್ ಪಂದ್ಯ ನಿಗದಿ...

ICC World Cup 2023: ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಕುತೂಹಲಕಾರಿ ಇಂಡೋ ಪಾಕ್ ಪಂದ್ಯ ನಿಗದಿ !

ICC World Cup 2023
image source: The economic times

Hindu neighbor gifts plot of land

Hindu neighbour gifts land to Muslim journalist

ICC World Cup 2023: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಪ್ರಕಟವಾಗಿದೆ. ಮೊದಲ ಬಾರಿಗೆ ಇಡೀ ಟೂರ್ನಿಯನ್ನು ಭಾರತದಲ್ಲಿ ಆಯೋಜಿಸಲಾಗುತ್ತಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ ವೇಳಾಪಟ್ಟಿಯನ್ನು ಐಸಿಸಿ (ICC World Cup 2023) ಪ್ರಕಟಿಸಿದೆ.

ಅಕ್ಟೋಬರ್ 5 ರಂದು ಅಹಮದಾಬಾದ್‌ನಲ್ಲಿ ಇಂಗ್ಲೆಂಡ್-ನ್ಯೂಜಿಲೆಂಡ್ (ENG vs NZ) ಪಂದ್ಯದೊಂದಿಗೆ ಪಂದ್ಯಾವಳಿ ಆರಂಭವಾಗಲಿದ್ದು, ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿಯೇ ಫೈನಲ್ ನಡೆಯಲಿದೆ. ಭಾರತ-ಪಾಕಿಸ್ತಾನ (IND vs PAK) ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ 1,30,000 ಪ್ರೇಕ್ಷಕರಿಗೆ ಆತಿಥ್ಯ ವಹಿಸುತ್ತದೆ.

2023ರ ಏಕದಿನ ವಿಶ್ವಕಪ್‌ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಇದರಲ್ಲಿ ಭಾರತ ಸೇರಿದಂತೆ 8 ತಂಡಗಳು ಈಗಾಗಲೇ ವಿಶ್ವಕಪ್‌ಗೆ ಅರ್ಹತೆ ಪಡೆದಿದೆ. ವಿಶ್ವಕಪ್ 46 ದಿನಗಳ ಕಾಲ ನಡೆಯಲಿದ್ದು, 3 ನಾಕೌಟ್ ಸೇರಿದಂತೆ 48 ಪಂದ್ಯಗಳು ನಡೆಯಲಿವೆ. ಐಸಿಸಿ ಏಕದಿನ ವಿಶ್ವಕಪ್ 2023 ವೇಳಾಪಟ್ಟಿ ಇಲ್ಲಿದೆ.

ಭಾರತ ಪಂದ್ಯದ ವೇಳಾಪಟ್ಟಿ:-
• ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ
• ಭಾರತ vs ಅಫ್ಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
• ಭಾರತ vs ಪಾಕಿಸ್ತಾನ- 15 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
• ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ
• ಭಾರತ vs ನ್ಯೂಜಿಲೆಂಡ್- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ
• ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ
• ಭಾರತ vs ಕ್ವಾಲಿಫೈಯರ್ 2- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ
• ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ
• ಭಾರತ vs ಕ್ವಾಲಿಫೈಯರ್ 1- 11 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು