Home Breaking Entertainment News Kannada ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ಹೃದಯಘಾತಕ್ಕೆ ಬಲಿ

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ಹೃದಯಘಾತಕ್ಕೆ ಬಲಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ (63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ.

ವಿಜಯ್ ಕುಮಾರ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೃದಯಘಾತದಿಂದ ಭಾನುವಾರ ರಾತ್ರಿ 9.30 ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ದಿವಂಗತ ಡಾ.ವಿಷ್ಣುವರ್ಧನ್ ಗೆ ಆಪ್ತರಾಗಿದ್ದ ನಿರ್ಮಾಪಕ ವಿಜಯ್ ಕುಮಾರ್, ನಟ ವಿಷ್ಣುವರ್ಧನ್ರ ಲಯನ್ ಜಗಪತಿ ರಾವ್, ಜಗದೇಕ ವೀರ ಮತ್ತು ಸಿಂಹಾದ್ರಿಯ ಸಿಂಹ ಮುಂತಾದ ಚಿತ್ರಗಳ ನಿರ್ಮಾಣ ಮಾಡಿದ್ದಾರೆ. ಇನ್ನು ಬಿ.ಎಸ್.ಯಡಿಯೂರಪ್ಪನವರ ಸಮಯದಲ್ಲಿ ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಸದ್ಯ ನಿರ್ಮಾಪಕ ವಿಜಯ್ ಕುಮಾರ್ ಪಾರ್ಥಿವ ಶರೀರವನ್ನು ಜಯನಗರದ ನಿವಾಸಕ್ಕೆ ರವಾನಿಸಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಕುಟುಂಬದ ಆಪ್ತರಿಗಷ್ಟೇ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.