ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಮೂವರು ಬಾಲಕರು ಸೇರಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ದ್ವಿಚಕ್ರ ವಾಹನಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ವಾಹನಗಳು ಸೇರಿದಂತೆ ಒಟ್ಟು ಒಂಭತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೊತ್ತ ರೂ.4.50ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
Sponsoredಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣಗಳು ದಾಖಲಾಗಿದ್ದವು.
ಆರೋಪಿಗಳು ಐಷರಾಮಿ ಜೀವನ ನಡೆಸುವ ಉದ್ದೇಶದಿಂದ ಅಪರಾಧ ಕೃತ್ಯ, ಸರಗಳ್ಳತನದಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ವಿಚಾರಣೆಯಿಂದ ತಿಳಿದು ಬಂದಿದೆ.




