Home Crime ಚಿಕಿತ್ಸೆ ವೇಳೆ 6 ಮಕ್ಕಳಿಗೆ ಎಚ್‌ಐವಿ ಸೋಂಕು: ರಾಜ್ಯಗಳಿಗೆ ಎನ್‌ಎಚ್‌ಆರ್‌ಸಿ ನೋಟಿಸ್

ಚಿಕಿತ್ಸೆ ವೇಳೆ 6 ಮಕ್ಕಳಿಗೆ ಎಚ್‌ಐವಿ ಸೋಂಕು: ರಾಜ್ಯಗಳಿಗೆ ಎನ್‌ಎಚ್‌ಆರ್‌ಸಿ ನೋಟಿಸ್

Students HIV Case

Hindu neighbor gifts plot of land

Hindu neighbour gifts land to Muslim journalist

ಹೊಸದಿಲ್ಲಿ: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಬಾಯಿ ಪಟೇಲ್ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ 6 ಮಕ್ಕಳಿಗೆ ಎಚ್‌ಐವಿ ಸೋಂಕು ತಗುಲಿದ ಪ್ರಕರಣ ಸಂಬಂಧ ಸರಕಾರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಉಸ್ತುವಾರಿ ಮತ್ತು ಇಬ್ಬರು ಲ್ಯಾಬ್ ಟೆಕ್ನಿಷಿಯನ್‌ಗಳನ್ನು ಮಧ್ಯಪ್ರದೇಶ ಸರಕಾರ ಗುರುವಾರ ಅಮಾನತುಗೊಳಿಸಿದೆ. ರಕ್ತ ನಿಧಿ ಕೇಂದ್ರದ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಎಚ್‌ಐವಿ ಸೋಂಕಿತರ ರಕ್ತವನ್ನು ಮಕ್ಕಳಿಗೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತನಿಖಾ ಸಮಿತಿ ನೀಡಿದ ವರದಿ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಈ ಮಧ್ಯೆ, ಮಧ್ಯಪ್ರದೇಶದ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿಗೊಳಿಸಿದೆ. “ದೇಶದ ವಿವಿಧ ಭಾಗಗಳಲ್ಲಿ ಇಂಥ ಘಟನೆಗಳು ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ರಕ್ತ ನಿಧಿ ಕೇಂದ್ರಗಳ ಮೇಲೆ ನಿಗಾ ವಹಿಸಬೇಕು,” ಎಂದಿರುವ ಆಯೋಗವು, ಇಂಥ ಘಟನೆಗಳ ಬಗ್ಗೆ ನಾಲ್ಕು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಎಲ್ಲ ರಾಜ್ಯಗಳ ಮುಖ್ಯ ಕಾಠ್ಯದರ್ಶಿಗಳಿಗೆ ನೋಟಿಸ್ ನೀಡಿದೆ.