Home » ಚಾಕು ತೋರಿಸಿ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ 75ರ ಅಜ್ಜ

ಚಾಕು ತೋರಿಸಿ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ 75ರ ಅಜ್ಜ

0 comments

ಮೊಮ್ಮಗಳಿಗೆ ಆಸರೆಯಾಗಿ ರಕ್ಷಣೆ ನೀಡಬೇಕಾಗಿದ್ದ ತಾತನೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ, ಕೊಲೆ ಮಾಡಲು ಯತ್ನಿಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶರಣಪ್ಪ ಟಣಕೇದಾರ್ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಚೂರಿ ತೋರಿಸಿ ಬೆದರಿಸಿದ್ದಲ್ಲದೆ, ಬಾಲಕಿಯ ಬಟ್ಟೆ ಬಿಚ್ಚಿಸಿ, ಬಾಯಿಗೆ ಬಟ್ಟೆ ತುರುಕಿ ಕೊಲೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ.

ಬಾಲಕಿಯ ತಾಯಿ ಬೆಂಗಳೂರಿಗೆ ತೆರಳಿದ್ದ ವೇಳೆ, ಬಾಲಕಿಯನ್ನು ಅಜ್ಜ-ಅಜ್ಜಿಯ ಮನೆಯಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಇದೇ ಸಂದರ್ಭ ಕೃತ್ಯಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಬಾಲಕಿಯ ಹೊಟ್ಟೆ ಭಾಗದಲ್ಲಿ ಗಾಯವಾಗಿರುವುದು ಪತ್ತೆಯಾಗಿದೆ. ವಿಷಯ ತಿಳಿದ ಬಳಿಕ ಬಾಲಕಿಯನ್ನು ಚಿಕಿತ್ಸೆ ಹಾಗೂ ರಕ್ಷಣೆಯ ಹಿನ್ನೆಲೆಯಲ್ಲಿ ಬಾಲಮಂದಿರಕ್ಕೆ ರವಾನಿಸಲಾಗಿದೆ.

ಸೆಪ್ಟೆಂಬರ್ 23 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶರಣಪ್ಪ ವಿರುದ್ಧ ಪೋಕ್ಸೋ (POCSO) ಕಾಯ್ದೆ ಹಾಗೂ ವಿವಿಧ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

You may also like