Home Crime Haveri: ನೇಹಾ ಹತ್ಯೆ ಬಳಿಕ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ – ಹಿಂದೂ ಯುವತಿಯನ್ನು...

Haveri: ನೇಹಾ ಹತ್ಯೆ ಬಳಿಕ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ – ಹಿಂದೂ ಯುವತಿಯನ್ನು ಬರ್ಬರವಾಗಿ ಕೊಂದ ಮುಸ್ಲಿಂ ಯುವಕ!! ಲವ್ ಜಿಹಾದ್ ಆರೋಪ?

Hindu neighbor gifts plot of land

Hindu neighbour gifts land to Muslim journalist

Haveri: ಕಳೆದ ವರ್ಷ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ನ್ಯಾಯ ದೊರೆಯುವ ಮುಂಚಿತವಾಗಿ ಹಾಗೂ ಈ ಘಟನೆ ಮಾಸುವ ಮುನ್ನವೇ ಇದೀಗ ಹಾವೇರಿಯಲ್ಲಿ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡೆದಿದ್ದು ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಭೀಕರವಾಗಿ ಕೊಲೆಗೈದಿದ್ದಾನೆ.

ಕೊಲೆಯಾದ ಯುವತಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ನಿವಾಸಿ ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ತಿಳಿಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ., ಆರೋಪಿ ನಯಜ್ ನನ್ನು ಹಲಗೇರಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಏನಿದು ಘಟನೆ?

ಮಾರ್ಚ್ 3 ರಂದು ಸ್ವಾತಿ ರಮೇಶ್ ಬ್ಯಾಡಗಿ ಕಾಣೆಯಾಗಿದ್ದಳು. ಈ ಕುರಿತು ಸ್ವಾತಿ ಪೋಷಕರು ಮಿಸ್ಸಿಂಗ್ ದೂರು ದಾಖಲಿಸಿದ್ದರು. ಮಾರ್ಚ್ 6 ರಂದು ಸ್ವಾತಿಯ ಮೃತದೇಹ ಪತ್ತೆಯಾಗಿತ್ತು. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಪತ್ತೇಪೂರ ಗ್ರಾಮದ ತುಂಗಭದ್ರಾ ನದಿ ಬಳಿ ಶವ ಪತ್ತೆಯಾಗಿತ್ತು. ಬಳಿಕ ಪೋಸ್ಟ್ಮಾರ್ಟಂ ರಿಪೋರ್ಟ್ ನಲ್ಲಿ ಇದು ಆಕಸ್ಮಿಕ ಸಾವಲ್ಲ ಕೊಲೆಯಾಗಿದೆ ಎಂದು ತಿಳಿದು ಬಂದಿದೆ. ಇದೀಗ ಕುಟುಂಬಸ್ಥರು ಲವ್ ಜಿಹಾದ ನಿಂದ ನಮ್ಮ ಮಗಳನ್ನು ಕಳೆದುಕೊಂಡಿದ್ದೇವೆ ಎಂದು ಮೃತ ಸ್ವಾತಿ ಪೋಷಕರು ಆರೋಪಿಸುತ್ತಿದ್ದಾರೆ.