ಸೋಮವಾರ, 26 ಅಕ್ಟೋಬರ್ 2026
Trending

ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನ, ವಿರೋಧಿಸಿದ್ದಕ್ಕೆ ಆಕೆಯ ಮಗುವಿನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿದ ಪಾಪಿ!

ಮಡಿಕೇರಿ: ವ್ಯಕ್ತಿಯೊಬ್ಬ ತನ್ನ ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದು, ಆಕೆ ವಿರೋಧ ಮಾಡಿದಾಗ ಮಗುವನ್ನು ಕೊಲೆ ಮಾಡಿದ್ದಾನೆ.

Sponsored

ಕೊಡಗು ಜಿಲ್ಲೆ ವಿರಾಜಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದಾಗ ಆಕೆ ವಿರೋಧಿಸಿದಾಗ ಸಿಟ್ಟಿನಿಂದ ಆಕೆಯ ನಾಲ್ಕು ವರ್ಷದ ಮಗುವಿನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿದ್ದಾನೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಾಪ್‌ (35) ಎಂಬುವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿರಾಜಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.