ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣಕ್ಕೆ ಕುರಿತಂತೆ ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳ ವಿವರಗಳನ್ನು ಪೊಲೀಸ್ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ.
ಭರತ್ ಕುಮ್ಡೇಲು, ಅಭಿನ್ ರೈ, ಪ್ರದೀಪ್, ಶಿವಪ್ರಸಾದ್, ರಂಜಿತ್ ಹಾಗೂ ತೇಜಾಕ್ಷ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ಪಟ್ಟಿಯನ್ನು ಇಲಾಖೆ ಪ್ರಕಟ ಮಾಡಿದೆ. ಈ ಎಲ್ಲಾ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.


