Home Crime Infosys: ‘ಇನ್ಫೋಸಿಸ್’ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ: ದೂರು ದಾಖಲು

Infosys: ‘ಇನ್ಫೋಸಿಸ್’ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ: ದೂರು ದಾಖಲು

Hindu neighbor gifts plot of land

Hindu neighbour gifts land to Muslim journalist

Infosys: ಇನ್ಫೋಸಿಸ್ (Infosys) ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ (Sudha Murthy) ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ (Cyber Crime Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲವು ದಿನಗಳ ಹಿಂದೆ ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ‘ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ಹೇಳಿ ನಿಮ್ಮ ಮೊಬೈಲ್ ನಂಬರ್ ಅನ್ನು ಆಧಾರ್‌ಗೆ ಲಿಂಕ್ ಮಾಡದೆ ನೋಂದಾಯಿಸಲಾಗಿದೆ. ಆದ್ದರಿಂದ ವ್ಯೆಯಕ್ತಿಕ ಮಾಹಿತಿ ನೀಡಿ ಅಂತಾ ಮಾಹಿತಿ ಕೇಳಿದ್ದ. ಅಲ್ಲದೇ ನಿಮ್ಮ ನಂಬರ್‌ನಿಂದ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನ ನಾನು ನಿಲ್ಲಿಸಿದ್ದೇನೆ’ ಎಂದೆಲ್ಲ ಹೇಳಿದ್ದ.

ಇದನ್ನೂ ಓದಿ:Limca Book of Records: ಗಾಯಕ ‘ಜುಬೀನ್ ಗಾರ್ಗ್’ ಅಂತಿಮ ಯಾತ್ರೆ ‘ಲಿಮ್ಕಾ ದಾಖಲೆ’ಗೆ ಸೇರ್ಪಡೆ

ಈ ವೇಳೆ ಅನುಮಾನಗೊಂಡ ಸುಧಾಮೂರ್ತಿ ಅವರು, ಕರೆ ಬಂದಿದ್ದ ನಂಬರ್‌ ಅನ್ನು ಟ್ರೂಕಾಲರ್ ಮೂಲಕ ಪರಿಶೀಲಿಸಿದ ವೇಳೆ ಟ್ರೂಕಾಲರ್‌ನಲ್ಲಿ ಟೆಲಿಕಾಂ ಡೆಪಾರ್ಟ್ಮೆಂಟ್ ಎಂದು ಬಂದಿತ್ತು. ಕೂಡಲೇ ಸೈಬರ್ ವಂಚಕರ ವಿರುದ್ಧ ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ವಂಚಕನ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.