Home Crime Mangaluru : ಮುಸ್ಲಿಂ ಮೀನು ವ್ಯಾಪಾರಿಯ ಅಟ್ಟಾಡಿಸಿಕೊಂಡು ಕೊಲೆಗೆ ಯತ್ನ – ಹಿಂದೂ ಮಹಿಳೆಯ ಸಮಯಪ್ರಜ್ಞೆಯಿಂದ...

Mangaluru : ಮುಸ್ಲಿಂ ಮೀನು ವ್ಯಾಪಾರಿಯ ಅಟ್ಟಾಡಿಸಿಕೊಂಡು ಕೊಲೆಗೆ ಯತ್ನ – ಹಿಂದೂ ಮಹಿಳೆಯ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

Hindu neighbor gifts plot of land

Hindu neighbour gifts land to Muslim journalist

Mangaluru : ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಕರಾವಳಿಯಲ್ಲಿ ನೆತ್ತರನ್ನು ಹರಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೆ ಮಂಗಳೂರಿನಲ್ಲಿ ಮುಸ್ಲಿಂ ಮೀನು ವ್ಯಾಪಾರಿ ಒಬ್ಬನನ್ನು ಅಟ್ಟಾಡಿಸಿಕೊಂಡು ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಹೌದು, ಮಂಗಳೂರು ನಗರದ ಕುಂಟಿಕಾನದ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನು ವ್ಯಾಪಾರಿಯ ಕೊಲೆ ಯತ್ನ ನಡೆದಿದೆ. ಆದರೆ ಹಿಂದೂ ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ ಈ ಮೀನು ವ್ಯಾಪಾರಿ ಬಚಾವ್ ಆಗಿದ್ದಾನೆ.

ಅಂದಹಾಗೆ ಲುಕ್ಮಾನ್ ಅವರು ವ್ಯಕ್ತಿಯೊಬ್ಬರಿಗೆ ಮೀನು ನೀಡಲು ರಸ್ತೆಯಲ್ಲಿ ಕಾಯುತ್ತಿದ್ದರು. ಈ ವೇಳೆ ಇನ್ನೊವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿ, ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ಹಿಂದೂ ಮಹಿಳೆಯೊಬ್ಬಳು ನೋಡಿ ಭಯದಿಂದ ಬೊಬ್ಬೆ ಹಾಕಿದ್ದು, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.