ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ, ಆರೋಪಿ ಪೊಲೀಸ್ ಠಾಣೆಗೆ ಶರಣು
ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಸೋಮವಾರ ಬೆಳಿಗ್ಗೆ ಸುಮಾರು 8.45 ಗಂಟೆ 17 ವರ್ಷದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
Sponsoredಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ.



