ಶನಿವಾರ, 24 ಅಕ್ಟೋಬರ್ 2026

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ, ಆರೋಪಿ ಪೊಲೀಸ್‌ ವಶಕ್ಕೆ

ಬಂಟ್ವಾಳ: ಬಿ.ಸಿ.ರೋಡ್‌ನ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣದಲ್ಲಿ ಜುಲೈ 16 ರಂದು ಲಾವಣ್ಯ ಎಂಬಾಕೆಯನ್ನು ಕೊಲೆ ಮಾಡಿದ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಘಟನೆಯ ಬಳಿಕ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಧೃಡಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ.