ಬಂಟ್ವಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ, 1 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ
ಬಂಟ್ವಾಳ,ಆ 17: ಹಾಸನ ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದು, ಜೊತೆಗೆ ಓರ್ವ ಆರೋಪಿಯ ಬಂಧನ ಮಾಡಿ, ಆತನಿಂದ 1.05ರೂ ಕೋಟಿ ಮೌಲ್ಯದ ಮಾದಕವಸ್ತು ಮತ್ತಿತರ ಸೊತ್ತುಗಳನ್ನು ವಶಪಡಿಸಿದ್ದಾರೆ.
Sponsoredಅಮೀರ್ ಜರ್ತಾಬ್ (35ವ) ಬಂಧಿತ ಆರೋಪಿ. ಈತ ಬೆಂಗಳೂರಿನ ಕೆಂಗೇರಿ ನಿವಾಸಿ. ರಾತ್ರಿ ಸಮಯದಲ್ಲಿ ಹಾಸನದಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಈ ಕಾರ್ಯಾಚರಣೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.



