ಭಾನುವಾರ, 25 ಅಕ್ಟೋಬರ್ 2026
Trending

ಬಂಟ್ವಾಳ: ಚಲಿಸುತ್ತಿದ್ದ ಶಾಲಾ ಬಸ್‌ ಮೇಲೆ ಮರ ಕುಸಿತ: ಬಾಲಕಿ ಸಾವು, ಇಬ್ಬರು ಮಕ್ಕಳಿಗೆ ಗಾಯ

ಬಂಟ್ವಾಳ, ಜು.22: ತಾಲೂಕಿನ ಬರೀಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಸಮೀಪ ಬುಧವಾರ ಸಂಜೆ ನಡೆದ ಶಾಲಾ ಬಸ್‌ ಮೇಲೆ ಬೃಹತ್‌ ಗಾತ್ರದ ಮರ ಕುಸಿದು ಬಿದ್ದ ಪರಿಣಾಮ ಒಂದನೇ ತರಗತಿಯ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

Sponsored

ಮೃತ ವಿದ್ಯಾರ್ಥಿನಿಯನ್ನು ಚಿರನ್ವಿ (5 1/2) ವರ್ಷ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರು ಮಕ್ಕಳನ್ನು ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿದಿದೆ.

ಮರ ಬಿದ್ದ ರಭಸಕ್ಕೆ ಬಸ್‌ನ ಮೇಲ್ಭಾಗ ಸಂಪೂರ್ಣ ಜಖಂಗೊಡಿದೆ. ಕಿಟಕಿಗಳ ಗಾಜುಗಳು ಪುಡಿಯಾಗಿದೆ. ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದ ಒಂದನೇ ತರಗತಿಯ ವಿದ್ಯಾರ್ಥಿನಿ ಚಿರನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದಿಬ್ಬರು ಮಕ್ಕಳು ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು, ಪೊಳಿಸರು, ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಮರ ತೆರವು ಮಾಡಿ ಮಕ್ಕಳನ್ನು ರಕ್ಷಣೆ ಮಾಡಿದರು. ಈ ಘಟನೆ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.