

Bantwala: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಮೂವರೂ ಸ್ಥಳೀಯರಾಗಿದ್ದು, ಇವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮಾಡಲಾಗುತ್ತಿದೆ. ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ದೀಪಕ್ ಮತ್ತು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಮೂವರು ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಹತ್ಯೆಗೆ ಕಾರಣ ಹಾಗೂ ಇದರಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.













