ಮಂಗಳವಾರ, 27 ಅಕ್ಟೋಬರ್ 2026
Trending

ಬಂಟ್ವಾಳ: ತಂದೆ ತಾಯಿ ಕೆಲಸಕ್ಕೆ ಹೋದಾಗ, ಮಗಳು ಚಿನ್ನದ ಜೊತೆ ನಾಪತ್ತೆ..!!

ಬಂಟ್ವಾಳ: ತಂದೆ-ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಯುವತಿಯೊಬ್ಬಳು ಮನೆಯಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sponsored

ಬರಿಮಾರು ನಿವಾಸಿ ಮಾದೇವಿ (21) ನಾಪತ್ತೆಯಾದ ಯುವತಿ ಎಂದು ತಿಳಿದುಬಂದಿದೆ. ಕಳೆದ ಆರು ತಿಂಗಳ ಕಾಲ ಧಾರವಾಡದ ಖಾಸಗಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆಕೆ, ಇತ್ತೀಚೆಗೆ ಉದ್ಯೋಗ ತೊರೆದು ತಂದೆ-ತಾಯಿಯೊಂದಿಗೆ ಮನೆಯಲ್ಲಿ ವಾಸಿಸುತ್ತಿದ್ದಳು.

Advertisement
Advertisement

ಜೂನ್ 11ರಂದು ಬೆಳಿಗ್ಗೆ ತಂದೆ-ತಾಯಿ ಕೆಲಸಕ್ಕೆ ತೆರಳಿದ್ದು, ಸಂಜೆ ಮನೆಗೆ ಮರಳಿದಾಗ ಮಗಳು ಮನೆಯಲ್ಲಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಬಳಿಕ ಎಲ್ಲೆಡೆ ಹುಡುಕಾಟ ನಡೆಸಿದರೂ ಆಕೆಯ ಸುಳಿವು ಲಭ್ಯವಾಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮನೆಯಿಂದ ಹೊರಡುವ ವೇಳೆ ಮಾದೇವಿ ಹಣ ಹಾಗೂ ಚಿನ್ನಾಭರಣವನ್ನು ಕೂಡ ತೆಗೆದುಕೊಂಡು ಹೋಗಿರುವ ಸಾಧ್ಯತೆ ಇದೆ ಎಂದು ಕುಟುಂಬದವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement