Home Crime Belthangady: ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

Belthangady: ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

Hindu neighbor gifts plot of land

Hindu neighbour gifts land to Muslim journalist

Belthangady: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನ್ನು ಶ್ರೀಧರ ವೆಂಕಟ ಕೃಷ್ಣ ಉಪಾಧ್ಯಯ ಹೊನ್ನಾವರ ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಅ. ಕ್ರ. 510/2015 ಕಲಾಂ. 379 ಐಪಿಸಿ ಪ್ರಕರಣ ದಾಖಲಾಗಿತ್ತು. ಈತ ಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಇದೀಗ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.