ಶನಿವಾರ, 24 ಅಕ್ಟೋಬರ್ 2026

ಬೆಳ್ತಂಗಡಿ: ಕೋಮು ಪ್ರಚೋದನೆಯ ಪೋಸ್ಟ್‌: ಯುವತಿ ಬಂಧನ

Crime

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್‌ಗಳನ್ನು ಹಾಕಿದ ಆರೋಪದಲ್ಲಿ ಬೆಳ್ತಂಗಡಿಯ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ.

ಮಂಗಳೂರು ನಗರದ ಬಜೆ ಠಾಣಾ ವ್ಯಾಪ್ತಿಯಲ್ಲಿ 2025 ನೇ ಸಾಲಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಯಲ್ಲಿ ಕಲಂ 353 (1), 353(2), 61 (2), 55 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಾಗಿತ್ತು. ಕೋಮು ಪ್ರಚೋದನಕಾರಿ ಫೋಸ್ಟ್ ಗಳನ್ನು ಬೆಳ್ತಂಗಡಿ ತಾಲೂಕಿನ ಯುವತಿಯೊಬ್ಬಳು ಹಂಚಿಕೊಂಡ ಬಗ್ಗೆ ತನಿಖೆಯಲ್ಲಿ ಕಂಡು ಬಂದಿತ್ತು.

ಮಾ.19 ರಂದು ಆರೋಪಿತ ಯುವತಿಯನ್ನು ದಸ್ತಗಿರಿಗೆ ಒಳಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಮೊಬೈಲ್ ಮತ್ತು ಪೋಸ್ಟ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.