ಭಾನುವಾರ, 25 ಅಕ್ಟೋಬರ್ 2026

ಬೆಳ್ತಂಗಡಿ: ಸರಣಿ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

3 ಬೆಳ್ತಂಗಡಿ : ಕರ್ನಾಟಕ ರಾಜ್ಯದ ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣಿ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

Sponsored

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಮಗನಾದ ಗ್ರಾಮದ ಅಜರಮಾರು ನಿವಾಸಿ ಹೈಡೊ ಕುಖ್ಯಾತ ಸರಣೆ ಕಳ್ಳ ಹಮೀದ್ ಕುಂಞಮೋನು@ ಜಾಫರ್ @ ಹಮೀದ್ @ ಲಾಡಿ ಹಮೀದ್(49) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಮಾಲತೇಶ್ ಅವರ ಸಹಕಾರದೊಂದಿಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಮತ್ತು ಸುದರ್ಶನ್ ಪವರ್ ಅವರು ಮಾ.2 ರಂದು ಬೆಳಗ್ಗೆ 12 ಗಂಟೆಗೆ ಸುಮಾರಿಗೆಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Marriage AdMarriage AdSponsored

ಈತ ಸಾಮಾನ್ಯ ಕಳ್ಳನಲ್ಲ ಆರೋಪಿ ವಿರುದ್ಧ ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 35 ಸರಣಿ ಕಳ್ಳತನ ಪ್ರಕರಣ ದಾಖಲಾಗಿದ್ದು. ಇದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 22 ಕಡೆಗಳಲ್ಲಿ ಬಂಧನದ ವಾರಂಟ್ ಹೊರಡಿಸಲಾಗಿತ್ತು. ಈತನ ಮೇಲೆ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ 5 ಪ್ರಕರಣ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಚಿಕ್ಕಮಗಳೂರು ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ 1 ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೇಲೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಹರಿಹರಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕೊಡಗು ಜಿಲ್ಲೆಯ ಬಾಗಮಂಡಲ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.