ಬೆಂಗಳೂರು: 15 ವರ್ಷದ ಮಗಳನ್ನು ತಾಯಿಯೇ ವೇಶ್ಯಾವಾಟಿಕೆ ದಂಧೆಗೆ ದೂಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sponsoredಮಾಂಸದಂಧೆಗೆ ದೂಡಿದ ತಾಯಿ ಹಣದಾಸೆಗೆ ತನ್ನ 15 ವರ್ಷದ ಮಗಳನ್ನೇ ಈ ಕರಾಳ ಕೃತ್ಯಕ್ಕೆ ದೂಡಿದ್ದು, ಈ ಆರೋಪದ ಮೇಲೆ ಬಾಲಕಿಯ ತಾಯಿ, ಆಕೆಯ ಮಲತಂದೆ ಹಾಗೂ ಮಧ್ಯವರ್ತಿಯನ್ನು ಬಂಧನ ಮಾಡಲಾಗಿದೆ.
ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಬಾಲಕಿಯನ್ನು ಮಧ್ಯವರ್ತಿಯ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಬಾಲಕಿ ಅಲ್ಲಿ ಸಂಜೆ ತನಕ ಗಿರಾಕಿಗಳ ಕಿರುಕುಳಕ್ಕೆ ಬಲಿಯಾಗುತ್ತಿದ್ದಳು. ಮಧ್ಯವರ್ತಿ ಬಾಲಕಿಯ ಜೊತೆ ಸಮಯ ಕಳೆಯಳೆಂದು ರೂ.6-ರೂ.10 ಸಾವಿರ ದವರೆಗೆ ಹಣ ನಿಗದಿ ಪಡಿಸುತ್ತಿದ್ದಳು. ಇದರಲ್ಲಿ ಅರ್ಧದಷ್ಟು ಹಣವನ್ನು ಆಕೆಯ ತಾಯಿಗೆ ನೀಡಲಾಗುತ್ತಿತ್ತು ಎನ್ನುವ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗಗೊಂಡಿದೆ.
ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ಮಾಡಿ ಬಾಲಕಿಯನ್ನು ರಕ್ಷಣೆ ಮಾಡಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದು, ಪೊಲೀಸರು ಅವರ ಪತ್ತೆಗೆ ಬಲೆ ಬೀಸಿದ್ದಾರೆ.




