ಭಾನುವಾರ, 25 ಅಕ್ಟೋಬರ್ 2026
Trending

ಲಿವ್-ಇನ್ ಸಂಬಂಧದಲ್ಲಿದ್ದ ಪ್ರೇಯಸಿಯನ್ನು ಕತ್ತು ಹಿಸುಕಿ ಕೊಂದ ಪ್ರಿಯಕರ!!

ಬೆಂಗಳೂರು ನಗರದ ಮಲ್ಲೇಶ್ವರಂ ಪ್ರದೇಶದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. 

Sponsored

ಮೃತ ಯುವತಿಯನ್ನು 20 ವರ್ಷದ ಅನುಷಾ ಎಂದು ಗುರುತಿಸಲಾಗಿದ್ದು, ಆರೋಪಿ 25 ವರ್ಷದ ಶರತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರೂ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವರಾಗಿದ್ದಾರೆ. ಶರತ್ ವಾಟರ್ ಟ್ಯಾಂಕರ್ ಚಾಲಕನಾಗಿ ಕೆಲಸ ಮಾಡ್ತಿದ್ದು, ಮೃತ ಅನುಷಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಮೊದಲು ಇನ್ಸ್‌ಸ್ಟಾಗ್ರಾಮ್‌ ಮೂಲಕ ಶರತ್ ಹಾಗೂ ಅನುಷಾ ಪರಿಚಯವಾಗಿದೆ. ಬಳಿಕ ಇಬ್ಬರೂ ಲಿವ್ ಇನ್ ರಿಲೇಷನ್‌ ಶಿಪ್‌ನಲ್ಲಿದ್ದಾರೆ. ಮಲ್ಲೇಶ್ವರದ ಬಾಡಿಗೆ ಮನೆಯೊಂದರಲ್ಲಿ ಕಳೆದ 6 ತಿಂಗಳಿನಿಂದ ಒಟ್ಟಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ಕಳೆದ ಶನಿವಾರ ವೈಯಕ್ತಿಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಬಳಿಕ ಶರತ್ ಅನುಷಾ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಶರತ್ ಸೋಮವಾರ ವಕೀಲರೊಬ್ಬರಿಗೆ ಕೊಲೆಯಾಗಿರೋ ವಿಚಾರ ತಿಳಿಸಿ, ಎಸ್ಕೇಪ್ ಆಗಿದ್ದ.

ಬಳಿಕ ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.