

Karkala: ಉದ್ಯಮಿಯೊಬ್ಬರು ಗುಂಡು ಹಾರಿಸಿಕೊಂಡು ಮೃತ ಹೊಂದಿರುವ ಘಟನೆ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ (ಎ.29) ಮುಂಜಾನೆ ನಡೆದಿದೆ.
ಕಾರ್ಕಳದ ದಿಲೀಪ್ ಎನ್.ಆರ್. ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ.
ದಿಲೀಪ್ ಕಾರ್ಕಳ ಪುರಸಭೆ ಮಾಜಿ ಅಧ್ಯಕ್ಷ ಸುಭೀತ್ ಎನ್.ಆರ್. ಅವರ ಸಹೋದರ ಎಂದು ವರದಿಯಾಗಿದೆ. ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದ ಇವರು ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.
ಪೊಲೀಸರು ತನಿಖೆ ನಡೆಸುತ್ತಿದ್ದಾರೆ.













