ಬುಧವಾರ, 28 ಅಕ್ಟೋಬರ್ 2026
Trending

Belthangady: ಯುವಕನಿಗೆ ಜಾತಿ ನಿಂದನೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳು ಬಂಧನ!

Belthangady: ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ.

Crime News Bangalore

Belthangady: ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ಶಿಬಾಜೆಯಲ್ಲಿ ನಡೆದಿದೆ. ಈ ಘಟನಾ ಕುರಿತು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಬಂಧಿತ ಆರೋಪಿಗಳಾಗಿದ್ದಾರೆ.

Sponsored

ಮೇ 15ರಂದು ಶಿಬಾಜೆಯ ಕುರುಂಜ ಮನೆಯ ಎದುರು ನಿಂತಿದ್ದ ವೇಳೆ ಸ್ಥಳೀಯ ನಿವಾಸಿ ಪ್ರವೀಣ್‌ ಎಂಬಾತನ ಮೇಲೆ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ ಹಲ್ಲೆಗೆ ಯತ್ನಿಸಿದ್ದಾರೆ. ಆನಂದ ಗೌಡ ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡು ಮತ್ತು ತಿಮ್ಮಪ್ಪ ಪೂಜಾರಿ ಎಂಬವರು ಕಬ್ಬಿಣದ ಸಲಾಕೆಯನ್ನು ಹಿಡಿದು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಪ್ರವೀಣ್‌ ಮನೆಯೊಳಗೆ ರಕ್ಷಣೆ ಪಡೆದಿದ್ದಾರೆ.

Advertisement
Advertisement
Advertisement