Advertisement
Advertisement
ಚಾರ್ಮಾಡಿ: ಇಲ್ಲಿನ ಚಾರ್ಮಾಡಿ ಗ್ರಾಮದ ವಿದ್ಯುತ್ ಡ್ಯಾಮ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನ.4 ರಂದು ನಡೆದಿದೆ.
Sponsoredಸ್ಥಳೀಯರು ನೀಡಿದ ಮಾಹಿತಿಯನ್ನಾಧರಿಸಿ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತ್ತೆಯಾದ ಶವವು ತೀವ್ರ ಕೊಳೆತ ಸ್ಥಿತಿಯಲ್ಲಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಈ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ