Home Crime Chikkamagaluru: ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ದುಷ್ಕರ್ಮಿಗಳು

Chikkamagaluru: ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ದುಷ್ಕರ್ಮಿಗಳು

Image Credit: Asianet Suvarna Kannada

Hindu neighbor gifts plot of land

Hindu neighbour gifts land to Muslim journalist

Chikkamagaluru: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆಯೊಂದು ನಡೆದಿದೆ.

ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಕೂಡಿಹಾಕಿ ಬೇರೆ ಕಡೆ ಸಾಗಿಸಲು ಪ್ರಯತ್ನ ಪಟ್ಟಿದ್ದಾರೆ. ಆದರೆ ಪ್ರಯತ್ನ ವಿಫಲವಾಗಿದೆ. ಇದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಇದರಿಂದ ಹಸು ಸಾವಿಗೀಡಾಗಿದೆ.

ಯಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಜನವರಿ 12 ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆ ನಡೆದಿತ್ತು. ಜ.16 ರಂದು ಮೈಸೂರು ಜಿಲ್ಲೆ ನಂಜನಗೂಡು ನಂಜುಂಡೇಶ್ವರ ದೇವಾಲಯದ ಬಳಿ ಹರಕೆಗೆ ಬಿಟ್ಟ ಆಕಳು ಕರುವಿನ ಬಾಲವನ್ನು ಕತ್ತರಿಸಲಾಗತ್ತು. ಜ.20 ರಂದು ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹಸು ಕತ್ತರಿಸಿ ಗರ್ಭದಲ್ಲಿದ್ದ ಕರುವನ್ನು ಕಿತ್ತೆಸೆಯಲಾಗಿತ್ತು. ಜ.30 ರಂದು ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಎಂಬಲ್ಲಿ ಹಸುವಿನ ಬಾಲ ಕತ್ತರಿಸಲಾಗಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಮೂಕ ಪ್ರಾಣಿಯ ಮೇಲೆ ತಮ್ಮ ವಿಕೃತಿ ಮೆರೆದಿದ್ದಾರೆ.