Home Crime Cough Syrup: ಕಾಫ್‌ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ: ಸ್ರೆಸನ್‌ ಫಾರ್ಮಾಸ್ಯುಟಿಕಲ್ಸ್‌ ಮಾಲೀಕನ ಬಂಧನ

Cough Syrup: ಕಾಫ್‌ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ: ಸ್ರೆಸನ್‌ ಫಾರ್ಮಾಸ್ಯುಟಿಕಲ್ಸ್‌ ಮಾಲೀಕನ ಬಂಧನ

Hindu neighbor gifts plot of land

Hindu neighbour gifts land to Muslim journalist

Cough Syrup: ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ ತಯಾರಿಕೆ ಮಾಡುತ್ತಿದ್ದ ಸ್ರೆನ್‌ ಫಾರ್ಮಾಸ್ಯುಟಿಕಲ್ಸ್‌ ಕಂಪನಿಯ ಮಾಲೀಕ ಎಸ್‌ ರಂಗನಾಥನ್‌ ಅವರನ್ನು ಬಂಧನ ಮಾಡಿದ್ದಾರೆ. ಇವರನ್ನು ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಚೆನ್ನೈನಲ್ಲಿ ಬಂಧನ ಮಾಡಿದ್ದಾರೆ.

ಬುಧವಾರ ರಾತ್ರಿ ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರಂಗನಾಥನ್‌ ಹಿಡಿದುಕೊಟ್ಟವರಿಗೆ 20 ಸಾವಿರ ನೀಡುವುದಾಗಿ ಮಧ್ಯಪ್ರದೇಶದ ಛಿಂದ್ವಾರಾ ಪೊಲೀಸರು ಘೋಷಣೆ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಬಂಧನವಾಗಿದೆ.

ಕಳೆದ 24 ಗಂಟೆಗಳಲ್ಲಿ ಇನ್ನೂ ಮೂರು ಮಕ್ಕಳು ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 20 ಕ್ಕೆ ಏರಿದೆ. ಐದು ಮಕ್ಕಳು ನಾಗ್ಪುರದಲ್ಲಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯಕೀಯ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ವಿಷಕಾರಿ ರಾಸಾಯನಿಕಗಳಿರುವುದನ್ನು ದೃಢಪಡಿಸಿದೆ. ಇದರ ಸೇವನೆಯಿಂದ ಮೂತ್ರಪಿಂಡಗಳಿಗೆ ಹಾನಿಯಾಗುತ್ತಿತ್ತು. ಈ ಕಾರಣಕ್ಕಾಗಿಯೇ ಅನೇಕ ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವಿಗೀಡಾಗಿದ್ದಾರೆ.