Home Crime Crime: ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

Crime: ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

Hindu neighbor gifts plot of land

Hindu neighbour gifts land to Muslim journalist

Crime: ಧಾರವಾಡ (Dharawad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರೇ SSLC ವಿದ್ಯಾರ್ಥಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಎಸ್​​ಎಸ್​ಎಲ್​ಸಿ ಓದುತ್ತಿದ್ದ ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಜ. 14 ರಂದು ಸಂಜೆ ನಡೆದಿದೆ.

ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ಓದುತ್ತಿದ್ದ ಆತನನ್ನು ಅದೇ ಶಾಲೆಯ ಓರ್ವ ಬಾಲಕ ಸೇರಿದಂತೆ ಮೂವರು ಬಾಲಕರು ಸೇರಿ ಕೊಲೆ ಮಾಡಿದ್ದಾರೆ.

ಬಾಲಕನ ಕೊಲೆಗೆ ಕಾರಣವಾಗಿದ್ದು ಶಾಲೆಯಲ್ಲಿ ನಡೆದ ಕ್ಷುಲಕ ವಿಚಾರ ಎನ್ನಲಾಗಿದೆ. ಕೊಲೆ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುಂದಗೋಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ. ಮೂವರು ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಕೊಲೆಗೆ ಬೇರೆಯೇ ಕಾರಣಗಳಿವೆಯೇ ಎಂಬುದರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.