Home Crime Bhatkala: ಗಬ್ಬದ ಹಸು ಕೊಂದು, ಕರುವನ್ನು ನದಿಗೆ ಬಿಸಾಡಿದ ಪಾತಕಿ ಅರೆಸ್ಟ್ !!

Bhatkala: ಗಬ್ಬದ ಹಸು ಕೊಂದು, ಕರುವನ್ನು ನದಿಗೆ ಬಿಸಾಡಿದ ಪಾತಕಿ ಅರೆಸ್ಟ್ !!

Hindu neighbor gifts plot of land

Hindu neighbour gifts land to Muslim journalist

Bhatkala: ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗಬ್ಬದ ಹಸುವನ್ನು ಕಡಿದು ಅದರೊಳಗಿದ್ದ ಕರುವನ್ನು ನದಿಗೆ ಬಿಸಾಡಿದ ಒಂದು ಅಮಾನುಷ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಈ ಕೃತ್ಯ ಎಸಗಿದ ಪಾತಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೌದು, ಭಟ್ಕಳ ತಾಲೂಕಿನ ವೆಂಕಟಾಪುರದ ಕುಕನೀರ್ ಪ್ರದೇಶದ ವೆಂಕಟಾಪುರ ನದಿಯ ದಂಡೆಯ ಮೇಲೆ ಗಬ್ಬದ ಹಸುವನ್ನು ಕಡಿದು (cow slaughter) ಮಾಂಸ ಮಾಡಿ, ಹಸುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು (embryo) ಚೀಲದಲ್ಲಿ ಸುತ್ತಿ ಬಿಸಾಡಿ ಹೋಗಿದ್ದ ಆರೋಪಿಯನ್ನು ಎರಡೇ ದಿನದಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ (Crime news) ಪೊಲೀಸರು ಯಶಸ್ವಿಯಾಗಿದ್ದಾರೆ. ಗೋವನ್ನು ಹತ್ಯೆ ಮಾಡಿದ್ದ ಆರೋಪಿಯನ್ನು ಹನೀಫಾಬಾದ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಹವ್ವಾ ಎಂದು ಗುರುತಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಎಸ್.ಪಿ ಎಂ.ನಾರಾಯಣ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮಹೇಶ ಕೆ. ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ತನಿಖಾ ತಂಡವು ಹಗಲು ರಾತ್ರಿ ಕಾರ್ಯಾಚರಣೆ ಮಾಡಿ, ಮಾಂಸ ಮಾರುವವರ, ಈ ಹಿಂದೆ ದನಗಳ್ಳತನ ಮಾಡಿರುವವರನ್ನು ಸೇರಿದಂತೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡಿ ಗೋವನ್ನು ಹತ್ಯೆ ಮಾಡಿದವನನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದು, ಶನಿವಾರ ರಾತ್ರಿಯೇ ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.