Home Crime Deadly Accident: ಕಾರು-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು!

Deadly Accident: ಕಾರು-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು!

Image Credit: Udayavani

Hindu neighbor gifts plot of land

Hindu neighbour gifts land to Muslim journalist

Deadly Accident: ಮದುವೆ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬಿಹಾರದ ಕತಿಹಾರ್‌ ಜಿಲ್ಲೆಯಲ್ಲಿ ಮಂಗಳವಾರ (ಇಂದು) ಮುಂಜಾನೆ ನಡೆದಿದೆ.

ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ-31 ರ ಸಮೇಲಿ ಬ್ಲಾಕ್‌ ಬಳಿ ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್‌ ಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಎಸ್‌ಯುವಿ ಕಾರಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಪೊಲೀಸರು ಘಟನೆ ನಡೆದಿರುವ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮೃತರೆಲ್ಲರೂ ಸುಪಾಲ್‌ ಜಿಲ್ಲೆಯ ನಿವಾಸಿಗಳು ಎಂದು ಹೇಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಪ್ರಾರಂಭ ಮಾಡಿದ್ದಾರೆ.