Home Crime Putturu: ಡೆಂಟಲ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕೇಸು ದಾಖಲು!

Putturu: ಡೆಂಟಲ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕೇಸು ದಾಖಲು!

Hindu neighbor gifts plot of land

Hindu neighbour gifts land to Muslim journalist

Putturu: ಸುಳ್ಯದ ಡೆಂಟಲ್‌ ಕಾಲೇಜಿನಲ್ಲಿ ಕಲಿಯುತ್ತಿದ್ದ ಯುವತಿಯೋರ್ವಳು ತನ್ನ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ತೆಲಸಂಗ ಗ್ರಾಮದ ಕೃತಿಕಾ ಸಿದ್ದಣ್ಣ ನಿಡೋಣಿ ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮೃತಳ ತಂದೆ ದೂರು ನೀಡಿದ್ದು, ಯವತಿ ಯಾವುದೋ ಕಾರಣದಿಂದ ಮನನೊಂದು ಆತ್ಮಹ್ಯತ್ಯೆ ಗೈದಿರಬಹುದು ಎನ್ನಲಾಗಿದೆ.

ವಸತಿ ನಿಲಯದ ಮಕ್ಕಳು ತಿಳಿಸಿದಂತೆ ಪಿರ್ಯಾದಿದಾರರು ಹೋಗಿ ನೋಡಿದಾಗ ಕೃತಿಕಾಳು ಫ್ಯಾನ್ಗೆ ಒಂದು ವೇಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ನೇತಾಡಿಕೊಂಡಿದ್ದು, ಈ ಬಗ್ಗೆ ಆಕೆಯ ಗೆಳತಿಯರಲ್ಲಿ ವಿಚಾರಿಸಿದಾಗ ಆಕೆಯು ಯಾರಿಗೋ ಪೋನ್ ಮಾಡಿ ತಾನು ಸಾಯುತ್ತೇನೆ ಎಂದು ಹೇಳುತ್ತಿದ್ದಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಕೃತಿಕಾಳು ಯಾವುದೋ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ದಿನಾಂಕ 26.02.2025 ರಂದು ರಾತ್ರಿ 7.10 ಗಂಟೆಯಿಂದ 7.30 ಗಂಟೆಯ ಮಧ್ಯೆ ಅವಧಿಯಲ್ಲಿ ಆಕೆಗೆ ನೀಡಿದ ರೂಮಿನಲ್ಲಿ ವೇಲ್ ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಯುಡಿಆರ್ 09-2025 ಕಲಂ:194 (3)(IV) BNSS 2023ಯಂತೆ ಪ್ರಕರಣ ದಾಖಲಾಗಿರುತ್ತದೆ