ಧರ್ಮಸ್ಥಳ: ಕನ್ಯಾಡಿ ಪುಡ್ಕೆತ್ ಚಡವು ಬಳಿ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಕುರಿತಂತೆ ಬಂಧಿತ ಆರೋಪಿ ಶರತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆ.3 ವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ನೀಡಿದೆ.
Sponsoredಜು.30 ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಅವರು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಮಯದಲ್ಲಿ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಾಯಗೊಂಡ ಬಾಲಕೃಷ್ಣ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸರು ಕಾರು ಚಾಲಕ ಶರತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆ.22 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸೆ.3ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




