Home Crime Edaneeru Shri: ಕಾರಿನಲ್ಲಿ ತೆರಳುತ್ತಿದ್ದ ಎಡನೀರು ಶ್ರೀಗಳ ಮೇಲೆ ದುಷ್ಕರ್ಮಿಗಳ ದಾಳಿ – ಕಾರಿನ ಗಾಜು...

Edaneeru Shri: ಕಾರಿನಲ್ಲಿ ತೆರಳುತ್ತಿದ್ದ ಎಡನೀರು ಶ್ರೀಗಳ ಮೇಲೆ ದುಷ್ಕರ್ಮಿಗಳ ದಾಳಿ – ಕಾರಿನ ಗಾಜು ಒಡೆದು, ಅವಾಚ್ಯ ಶಬ್ದಗಳಿಂದ ನಿಂದನೆ!!

Hindu neighbor gifts plot of land

Hindu neighbour gifts land to Muslim journalist

Edaneeru Shri: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಹಿಂದಿರುಗುವಾಗ ಈ ಘಟನೆ ನಡೆದಿದೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು, ಸೋಮವಾರ ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು( sachhidanand Bharati shripadangalavar) ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ಶ್ರೀಗಳಿಗೆ ಅವಮಾನ ಮಾಡಿದೆ. ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದ ದುಷ್ಕರ್ಮಿಗಳು ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದಿದ್ದಾರೆ . ಅವಾಚ್ಯ ಶಬ್ದಗಳಿಂದ ನಿಂದಿಸಿ ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದು ಕಾಸರಗೋಡು ಪೋಲಿಸರು ಘಟನೆ ಮಾಹಿತಿ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಸ್ವಾಮೀಜಿ ಮೇಲಿನ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಕೇರಳ ಸರ್ಕಾರವನ್ನು ಆಗ್ರಹಿಸಲಾಗಿದೆ. ಅಲ್ಲದೆ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲಾದ ಆದ ದಾಳಿ ಸಮಸ್ತ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದೆ ಎಂದು ಹಿಂದೂಪರ ಸಂಘಟನೆಗಳು ಕೆಂಡಕಾರಿವೆ.