Home » ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು

0 comments

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.

ಕೇರಳ ಮೂಲದ ಟ್ರಾವೆಲ್ಸ್‌ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಚಾಲಕ ನಿದ್ದೆ ಮಂಪರಿನಲ್ಲಿ ಇದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಮೃತರು ಕೇರಳ ಮೂಲದವರು ಎಂದು ವರದಿಯಾಗಿದೆ. ಮೃತದೇಹಗಳು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like