ಭಾನುವಾರ, 25 ಅಕ್ಟೋಬರ್ 2026
Trending

ಜೈಲಿನಿಂದಲೇ ತನ್ನ ಬಹುದಿನಗಳ ಗೆಳತಿ, ಇತರ ಮಹಿಳೆಯರಿಗೆ ಪ್ರಜ್ವಲ್‌ ವಿಡಿಯೋ ಕರೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಬಳಕೆ ಆರೋಪ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಇತರರ ವಿರುದ್ಧದ ಪ್ರಕರಣವನ್ನು ಎಸ್‌ಐಟಿಗೆ ವರ್ಗಾವಣೆ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Sponsored

140ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪ್ರಜ್ವಲ್‌ ರೇವಣ್ಣ ಮತ್ತು ಪ್ರತಾಪ್‌ ರೈ ಬಳಕೆ ಮಾಡುತ್ತಿದ್ದ ಮೊಬೈಲ್‌ನಲ್ಲಿ ಪತ್ತೆಯಾಗಿದ್ದು, ಪೊಲೀಸರು ಜಪ್ತಿ ಮಾಡಿರುವ ಮೊಬೈಲ್‌ನಲ್ಲಿ ತನ್ನ ಬಹುದಿನಗಳ ಗೆಳತಿ ಹಾಗೂ ಇತರೆ ಮಹಿಳೆಯರಿಗೆ ವಾಟ್ಸಪ್‌ ಮತ್ತು ವಿಡಿಯೋ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನೊಂದೆರಡೆ ನಾಲ್ಕು ಲೈಂಗಿಕ ದೌರ್ಜನ್ಯ ಈತನ ಮೇಲೆ ಪ್ರಕರಣವಿದ್ದು, ಇದರಲ್ಲಿ ಯಾವುದಾದರೂ ಸಂತ್ರಸ್ತೆಯರಿಗೆ ಬೆದರಿಕೆ ಕರೆ ಹಾಕಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

ಪ್ರಜ್ವಲ್‌ ರೇವಣ್ಣ ಕರೆ ಮಾಡಿದ್ದರೆನ್ನಲಾದ ಮಹಿಳೆಯರನ್ನು ವಿಚಾರಣೆಗೆ ಕರೆಸುವ ಸಾಧ್ಯತೆಯಿದೆ. ಇದು ಖಚಿತಗೊಂಡೆರೆ ಈ ಪ್ರಕರಣ ಗಂಭೀರ ಸ್ವರೂಪ ಪಡೆಯಲಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಡೀ ಪ್ರಕರಣವನ್ನು ಸಿಐಡಿ ಎಸ್‌ಐಟಿಗೆ ವರ್ಗಾವಣೆ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.