Home Crime Hanagal Case: ಹಾನಗಲ್‌ ರೇಪ್‌ ಕೇಸ್‌ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದ ಶಾಕಿಂಗ್‌ ಹೇಳಿಕೆ!!!

Hanagal Case: ಹಾನಗಲ್‌ ರೇಪ್‌ ಕೇಸ್‌ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದ ಶಾಕಿಂಗ್‌ ಹೇಳಿಕೆ!!!

Hanagal Case

Hindu neighbor gifts plot of land

Hindu neighbour gifts land to Muslim journalist

Hanagal Case: ಹಾನಗಲ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ(Hanagal gang Rape)ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯನವರು (CM Siddaramaiah) ಶಾಕಿಂಗ್ ಹೇಳಿಕೆ (Shocking Statement)ನೀಡಿದ್ದಾರೆ. ಈ ಗ್ಯಾಂಗ್ ರೇಪ್ ಕೇಸ್ ನಲ್ಲಿ ಯಾರನ್ನೂ ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪುತ್ತೂರು :ಬುಳೇರಿಕಟ್ಟೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ 

ತಾಲೂಕಿನ ನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದ ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರಿಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.