ಹರ್ಯಾಣದ ಗುರುಗ್ರಾಮ್‌ನಲ್ಲಿ ಮಹಿಳಾ ಬೈಕರ್ ಗೆ ಮಾರುತಿ ಸಿಯಾಝ್ ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ಸ್ಥಳದಿಂದ ಪರಾರಿಯಾದ ಘಟನೆ ನಡೆದಿತ್ತು. ಈ ಆರೋಪ ಕೇಳಿಬಂದಿರುವ ಪ್ರಕರಣ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.


ಈ ಪ್ರಕರಣದ ಆರೋಪಿ ಎನ್ನಲಾಗಿರುವ ಕಲ್ಯಾಣ್ ಬೈನ್ಸ್ಲಾ. ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತನ್ನನ್ನು ಅಂತಾರಾಷ್ಟ್ರೀಯ ಕಬಡ್ಡಿ ಪಟು ಹಾಗೂ ಭಾರತೀಯ ರಗ್ಬಿ ತಂಡದ ಸದಸ್ಯ ಎಂದು ಪರಿಚಯಿಸಿಕೊಂಡಿದ್ದಾನೆ.
ಸಂತ್ರಸ್ತ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಕಾರಿನಲ್ಲಿದ್ದವರು ತಮ್ಮನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದರು ಆರೋಪ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಆರೋಪಿಯಿಂದ ತಪ್ಪಿಸಿಕೊಳ್ಳಲು ಮಹಿಳೆ ಬೈಕ್‌ನಲ್ಲಿ ತೆರಳಲು ಯತ್ನಿಸುತ್ತಿದ್ದ ವೇಳೆ ಬಲಭಾಗದಿಂದ ಬಂದ ಮಾರುತಿ ಸಿಯಾಝ್ ಕಾರು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಹಿಳೆ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಬಳಿಕ ಕಾರು ನಿಲ್ಲಿಸದೆ ವೇಗವಾಗಿ ಸ್ಥಳದಿಂದ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ.
ವೈರಲ್ ಆಗಿರುವ ವೀಡಿಯೊವನ್ನು ಆಧರಿಸಿ ಗುರುಗ್ರಾಮ್ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನು ಕಾರಿನ ಮಾಲೀಕ ಆರೋಪಿ ಅವರ ಸ್ನೇಹಿತನಾಗಿದ್ದು, ಘಟನೆ ನಡೆದ ಸಂದರ್ಭದಲ್ಲಿ ತಾನು ಕಾರು ಚಲಾಯಿಸುತ್ತಿರಲಿಲ್ಲ ಎಂದು ತಿಳಿಸಿದ್ದಾನೆ. ಬೈನ್ಸ್ಲಾ ಕಾರು ಚಲಾಯಿಸುತ್ತಿದ್ದ ಎಂದು ವರದಿಯಾಗಿದೆ.

