ಸೋಮವಾರ, 26 ಅಕ್ಟೋಬರ್ 2026
Trending

ಹಾಸನ: ಡ್ರಾಪ್‌ ಕೊಡುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಯತ್ನ

Rape

ಹಾಸನ: ಕಾಲೇಜು ಡಿಗ್ರಿ ಓದುತ್ತಿರುವ ಪರಿಚಯಸ್ಥ ಆರೋಪಿ ಬಾಲಕಿಯೊಬ್ಬಳಿಗೆ ಡ್ರಾಪ್‌ ಕೊಡುವುದಾಗಿ ಹೇಳಿ, ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ನಡೆದಿದೆ. ವಾಪಾಸ್‌ ಕರೆದುಕೊಂಡು ಬರುವಾಗ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ಹೆದರಿಕೊಂಡ ಬಾಲಕಿ ಬೈಕ್‌ನಿಂದ ಜಿಗಿದಿದ್ದಾಳೆ. ಈ ಸಂದರ್ಭ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ.

Sponsored

ಆರೋಪಿ ವಿದ್ಯಾಭ್ಯಾಸದ ಜೊತೆ ಜೊತೆಗೆ ಪಾನಿಪುರಿ ಅಂಗಡಿ ನಡೆಸುತ್ತಿದ್ದ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗೆ ಸಾಥ್‌ ನೀಡಿರುವ ಇನ್ನಿಬ್ಬರು ಸ್ನೇಹಿತರನ್ನು ಪೊಲೀಸರು ಹುಡುಕುತ್ತಿದ್ದಾರೆ. ಈ ಪ್ರಕರಣ ಸಂಬಂಧ ಹಾಸನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.