# ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

- Link: https://hosakannada.com/crime/house-burglary-in-ullas-nagar-kavoor-police-arrest-accused-within-24-hours/
- Published: 2026-03-10T18:30:44+00:00
- Author: ಹೊಸಕನ್ನಡ ನ್ಯೂಸ್

ಮಂಗಳೂರು: ಉಲ್ಲಾಸ್‌ ನಗರದಲ್ಲಿರುವ ಮನೆಯೊಂದರಲ್ಲಿ ನಡೆದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ ಪ್ರಕರಣವನ್ನು
ಕಾವೂರು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Sponsored

ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ, ಮನೆಯವರು ಯಾರೂ ಇಲ್ಲದ ಸಂದರ್ಭದಲ್ಲಿ ಮನೆ
ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹4.80 ಲಕ್ಷ ಮೌಲ್ಯದ 39 ಗ್ರಾಂ ಚಿನ್ನದ ಆಭರಣ
ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದರು. ಈ ಕುರಿತು ನೀಡಲಾದ ದೂರಿನ ಆಧಾರದಲ್ಲಿ
ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

Advertisement

ಪ್ರಕರಣದ ತನಿಖೆಗಾಗಿ ಕಾವೂರು ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ಪತ್ತೆ ತಂಡವನ್ನು
ರಚಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಸಜೀಪನಡು ನಿವಾಸಿ ಅಶೋಕ್ (41)(
ತಂದೆ: ದೊಂಬಯ್ಯ ಪೂಜಾರಿ) ಎಂಬ ಆರೋಪಿಯನ್ನು ಮಾರ್ಚ್ 8ರಂದು ಬಂಧಿಸಿ, ಅವನಿಂದ ಕಳ್ಳತನಗೊಂಡಿದ್ದ 
ಎಲ್ಲಾ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ
ವಿಧಿಸಿದೆ.

ಈ ಕಾರ್ಯಾಚರಣೆಯಲ್ಲಿ ಕಾವೂರು ಪೊಲೀಸ್‌ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್
ಉಪನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಸಿಬ್ಬಂದಿಗಳಾದ ದಿನೇಶ್, ಮಾಲತೇಶ್, ನಾಗರಾಜ್ ಮತ್ತು
ರಿಯಾಜ್ ಭಾಗವಹಿಸಿದ್ದರು.

Advertisement
