Home Crime Crime: ಗರ್ಭಿಣಿ ಪತ್ನಿಯನ್ನು ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿದ ಪತಿ : ವಿಡಿಯೋ ವೈರಲ್

Crime: ಗರ್ಭಿಣಿ ಪತ್ನಿಯನ್ನು ನಡುರಸ್ತೆಯಲ್ಲೇ ಕಲ್ಲಿನಿಂದ ಜಜ್ಜಿದ ಪತಿ : ವಿಡಿಯೋ ವೈರಲ್

Hindu neighbor gifts plot of land

Hindu neighbour gifts land to Muslim journalist

Crime: ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಪತ್ನಿಗೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಏಪ್ರಿಲ್ 1 ರ ರಾತ್ರಿ ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ನ ಗಚಿಬೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಪತ್ನಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ನಂತರ ಆರೋಪಿಯು ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ.

ಈ ಭೀಕರ ಹಲ್ಲೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪತಿ ಮತ್ತು ಆತನ ಪತ್ನಿಯ ನಡುವೆ ನಡೆದ ವಾಗ್ವಾದದ ನಂತರ, ಆತ ದೊಡ್ಡ ಕಲ್ಲನ್ನು ಎತ್ತಿಕೊಂಡು ಆಕೆಗೆ ಪದೇ ಪದೇ ಹೊಡೆಸಿದ್ದಾನೆ. ಬಳಿಕ ಸತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ಗಾಯಗೊಂಡು ಬಿದ್ದಿದ್ದ ಮಹಿಳೆಯನ್ನು ದಾರಿಹೋಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅವರನ್ನು ನಿಜಾಮ್ ವೈದ್ಯಕೀಯ ವಿಜ್ಞಾನ ಸಂಸ್ಥೆ (NIMS) ಗೆ ಸ್ಥಳಾಂತರಿಸಲಾಯಿತು. ತಲೆಗೆ ಗಂಭೀರವಾದ ಗಾಯಗಳಾಗಿದ್ದರಿಂದ ಅವರು ಕೋಮಾಕ್ಕೆ ಜಾರಿದ್ದಾರೆ. ಪೊಲೀಸರ ಪ್ರಕಾರ, ಮೊಹಮ್ಮದ್ ಬಸ್ರತ್ ಅವರು ಅಕ್ಟೋಬರ್ 2024 ರಲ್ಲಿ ಕೋಲ್ಕತ್ತಾದ ಶಬಾನಾ ಪರ್ವೀನ್ ಅವರನ್ನು ಪ್ರೇಮ ವಿವಾಹವಾಗಿದ್ದರು. ಈ ದಂಪತಿಗಳು ಹಫೀಜ್‌ಪೇಟೆಯ ಆದಿತ್ಯನಗರದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.