Home Crime Crime: ಭಟ್ಕಳದಲ್ಲಿ ಅಕ್ರಮ ಕೋಣ ಸಾಗಾಟ: 17 ಕೋಣಗಳು ವಶ, ಆರೋಪಿಗಳು ಅರೆಸ್ಟ್

Crime: ಭಟ್ಕಳದಲ್ಲಿ ಅಕ್ರಮ ಕೋಣ ಸಾಗಾಟ: 17 ಕೋಣಗಳು ವಶ, ಆರೋಪಿಗಳು ಅರೆಸ್ಟ್

Hindu neighbor gifts plot of land

Hindu neighbour gifts land to Muslim journalist

Crime: ಭಟ್ಕಳದಿಂದ ಮಂಗಳೂರಿಗೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಪಿಎಸ್‍ಐ ರನ್ನಗೌಡ ಪಾಟೀಲ್ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಿದ ವೇಳೆ ವಾಹನದಲ್ಲಿ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಇದೀಗ ವಾಹನದ ಸಮೇತ 17 ಕೋಣಗಳನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ 2 ಕೋಣಗಳು ಸಾವನ್ನಪ್ಪಿವೆ. ಈ ಸಂಬಂಧ ಭಟ್ಕಳದ ಶಿರಾಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ (Crime) ದಾಖಲಾಗಿದೆ.