ಶನಿವಾರ, 7 ನವೆಂಬರ್ 2026

ಇನ್ಸ್ಟಾಗ್ರಾಂ ನಲ್ಲಿ ಎಡಿಟೆಡ್ ಫೋಟೋ ಹಾಕಿ ತೇಜೋವಧೆ: ಪೊಲೀಸರಿಗೆ ದೂರು

Instagram
Advertisement
Advertisement

ಪುತ್ತೂರು:ಸಾಮಾಜಿಕ ಜಾಲತಾಣ ಇನ್ನಾ ಗ್ರಾಮ್ ನಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಳವು ಮಾಡುತ್ತಿರುವಂತೆ ತನ್ನ ಫೋಟೋವನ್ನು ಎಡಿಟ್ ಮಾಡಿ ಪ್ರಕಟಿಸುವ ಮೂಲಕ ತನ್ನ ವಿರುದ್ಧ ಅಪಪ್ರಚಾರ ಹಾಗೂ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ಪ್ರಮುಖ ಹರಿಪ್ರಸಾದ್‌ ನೆಲ್ಲಿಕಟ್ಟೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Sponsored

ತಮ್ಮ ಫೋಟೋವನ್ನು ಮಹಿಳೆಯೊಬ್ಬರ ಕರಿಮಣಿ ಸರ ಕಳವು ಮಾಡುತ್ತಿರುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ, 2012ರಲ್ಲಿ ನಡೆದ ಘಟನೆ ಎಂಬುದಾಗಿ ಉಲ್ಲೇಖಿಸಿ ಪ್ರಕರಣದ ಸಂಖ್ಯೆಯನ್ನೂ ಪೋಸ್ಟ್‌ನಲ್ಲಿ ನಮೂದಿಸಲಾಗಿದೆ. ಆದರೆ, ಈ ಪೋಸ್ಟ್‌ಗೂ ತಮಗೂ ಯಾವುದೇ ಸಂಬಂಧವಿಲ್ಲ. ಇಂತಹ ಸುಳ್ಳು ಮಾಹಿತಿಯನ್ನು ಹರಡುವ ಮೂಲಕ ತಮ್ಮ ಮಾನಹಾನಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement
Advertisement

ಈ ರೀತಿಯ ಸುಳ್ಳು ಪೋಸ್ಟ್‌ಗಳನ್ನು ಪ್ರಕಟಿಸಿ ತಮ್ಮ ಗೌರವಕ್ಕೆ ಧಕ್ಕೆ ತರುತ್ತಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಹಂಚಿಕೆ ಮಾಡಿದವರಲ್ಲೊಬ್ಬರನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಬಗ್ಗೆ ಠಾಣೆಯಿಂದ ಹಿಂಬರಹ ನೀಡಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement