Home Crime Kadaba: ಮರಬಿದ್ದು ಸವಾರ ಸಾವು ಪ್ರಕರಣ; ರಸ್ತೆ ತಡೆ ನಡೆಸಿ ಪ್ರತಿಭಟನೆ

Kadaba: ಮರಬಿದ್ದು ಸವಾರ ಸಾವು ಪ್ರಕರಣ; ರಸ್ತೆ ತಡೆ ನಡೆಸಿ ಪ್ರತಿಭಟನೆ

Hindu neighbor gifts plot of land

Hindu neighbour gifts land to Muslim journalist

Kadaba: ಕಡಬ-ಪಂಜ ರಸ್ತೆಯಲ್ಲಿ ಸ್ಕೂಟಿ ಸವಾರನ ಮೇಲೆ ಮರ ಬಿದ್ದು ಸವಾರ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಸ್ತೆ ಪಕ್ಕ ಇರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಸರಕಾರ ನೀಡಬೇಕು ಎಂದು ಆಗ್ರಹಿಸಲಾಗಿದೆ.

ನ.2(ಇಂದು) ಶನಿವಾರ ಸಾರ್ವಜನಿಕರೆಲ್ಲ ಒಟ್ಟುಗೂಡಿ ಅವಘಡ ಸಂಭವಿಸಿದ ಸ್ಥಳದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಿದರು. ನಂತರ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಹಠ ಹಿಡಿದು ರಸ್ತೆಗೆ ಬಿದ್ದ ಮರಗಳನ್ನು ತೆರವುಗೊಳಿಸಲು ಅವಕಾಶ ನೀಡಲಿಲ್ಲ. ಹಾಗಾಗಿ ಕಡಬ-ಪಂಜ ರಸ್ತೆಯಲ್ಲಿ ಎರಡೂವರೆ ತಾಸು ವಾಹನ ಸಂಚಾರ ಸ್ಥಗಿತಗೊಂಡಿತು.

ನಂತರ ಪಂಜವಲಯದ ಅರಣ್ಯಾಧಿಕಾರಿ ಸಂಧ್ಯಾ ಅವರನ್ನು ಘಟನಾ ಸ್ಥಳಕ್ಕೆ ಬಂದು, ವಾರದೊಳಗೆ ಅಪಾಯಕಾರಿ ಮರಗಳನ್ನು ಗುರುತಿಸಿ ತೆರವುಗೊಳಿಸಲಾಗುವುದು ಎಂದು ಭರವಸೆ ನೀಡಿದ್ದು, ಮೃತ ವ್ಯಕ್ತಿಗೆ ಸರಕಾರದಿಂದ ಪರಿಹಾರ ಒದಗಿಸಲು ಪೂರಕ ವರದಿ ನೀಡಲಾಗುವುದು ಎಂದು ಹೇಳಿದ ನಂತರ ಪ್ರತಿಭಟನೆ ಹಿಂದೆಗೆದುಕೊಳ್ಳಲಾಯಿತು.