ಕಾರವಾರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದಲ್ಲಿ ಉತ್ತರಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡನನ್ನು ಬಂಧನ ಮಾಡಲಾಗಿದೆ.
16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ಮಾಡಿದ ಆರೋಪವಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನನ್ವಯ ಪಿಎಸ್‌ಐನನ್ನು ಅರೆಸ್ಟ್ ಮಾಡಲಾಗಿದೆ.
ಬಂಧಿತ ಆರೋಪಿ ಪಿಎಸ್‌ಐ ಅಭಿನಂದನ್ ಗೌಡ ರಾಮನಗರ ಜಿಲ್ಲೆಯ ಕನಕಪುರ ಮೂಲದವನು. ಈತ ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಠಾಣೆಗೆ ಎಲ್‌ಎನ್‌ಓ ಆಗಿ ವರ್ಗಾವಣೆಗೊಂಡಿದ್ದ.





