ಶನಿವಾರ, 24 ಅಕ್ಟೋಬರ್ 2026

Kolar (Bangarapet): ಕಾರು-ಬೈಕ್‌ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

Kolar (Bangarapet): ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಇನ್ನೋವಾ ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರು ಮೃತ ಹೊಂದಿರುವ ಘಟನೆ ನಡೆದಿದೆ.

Image Credit: TV9 Kannada

Kolar (Bangarapet): ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಇನ್ನೋವಾ ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರು ಮೃತ ಹೊಂದಿರುವ ಘಟನೆ ನಡೆದಿದೆ.

ಈ ದುರ್ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರಿನಲ್ಲಿದ್ದ ಕೆಜಿಎಫ್‌ ತಾಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್‌ ಸವಾರ ಮೃತರು. ಸುಶ್ಮಿತಾ, ವಿರುತ, ಸುಜಾತ, ಸುನಿಲ್‌ ಗಂಭೀರವಾಗಿ ಗಾಯಗೊಂಡವರು.

ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ವಾಪಾಸು ಬರುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.