ಕುಂದಾಪುರ: ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಬೆಳಗಿನ ಜಾವ 3.30 ರ ಸುಮಾರಿಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿನ ಹೋಲಿ ರೋಸರಿ ಚರ್ಚ್ ಎದುರಿಗೆ ನಡೆದಿದೆ.
Sponsoredಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದ ವ್ಯಕ್ತಿ.
ಹಣಕಾಸಿನ ವ್ಯವಹಾರ ಮಾಡಿಕೊಂಡಿದ್ದ ಐವನ್ ಅವರು ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೆನ್ಸ್ ಅವರನ್ನು ಬಿಟ್ಟು ಬಾರ್ಕೂರು ಮೂಲದ ಮಹಿಳೆಯೊಬ್ಬರ ಜೊತೆ ಸಂಸಾರ ಮಾಡುತ್ತಿದ್ದರು ಎನ್ನಲಾಗಿದೆ.
ಶುಕ್ರವಾರ ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಈ ಘಟನೆ ನಡೆದಿದೆ. ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದಿದ್ದು, ಪರಾರಿಯಾಗಿದ್ದಾನೆ. ಐವನ್ ಅವರು ತೀವ್ರ ರಸ್ತಸ್ರಾವದಿಂದ ಸ್ಥಳದಲ್ಲಿಯೇ ಮೃತ ಹೊಂದಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆ ಸಂದರ್ಭ ತಿಳಿದು ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




