ಸೋಮವಾರ, 26 ಅಕ್ಟೋಬರ್ 2026
Trending

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ, ಥಳಿಸಿದ ಸ್ಥಳೀಯರು; ಯುವಕ ಸಾವು

Advertisement

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಯುವಕನೋರ್ವ ಸಾವಿಗೀಡಾಗಿರುವುದು ತಡವಾಗಿ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ. ಮೃತ ಯುವಕ ಸುದೀಪ್‌ ಪಾಂಗೆ (19) ಎಂದು ಗುರುತಿಸಲಾಗಿದೆ.

Sponsored

ಮಾ.11 ರ ರಾತ್ರಿ ಸಾವಳಗಿ ಗ್ರಾಮ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರಕಾರಿ ಹಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಸಂದೀಪ್‌ ಪಾಂಗೆ ಈ ಸಂದರ್ಭದಲ್ಲಿ ಶಾಲೆಯ ಮೇಲ್ಛಾವಣಿ ಮೇಲೆ ಕುಳಿತುಕೊಂಡು ಕೆಳಗಿದ್ದ ಕಾರ್ಯಕ್ರಮದತ್ತ ಕಲ್ಲು ಎಸೆದಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದ್ದು, ಅಲ್ಲದೇ, ವಿದ್ಯಾರ್ಥಿನಿಯರು ಉಡುಪು ಬದಲಾಯಿಸುತ್ತಿದ್ದ ಸ್ಥಳದತ್ತ ಇಣುಕಿ ನೋಡಿರುವ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ. ಇದರಿಂದ ಕೋಪಗೊಂಡ ಕೆಲ ಯುವಕರು ಸುದೀಪ್‌ ಮೇಲೆ ಹಲ್ಲೆ ಮಾಡಿದ್ದರು.

Advertisement
Advertisement

ರಾಜು ಮಾಳಿ, ವಿಜಯ್‌ ಸಾವಳಗಿ, ಮಲ್ಲಿಕಾರ್ಜುನ ಮಾಳಿ ಮೂವರು ಯುವಕರು ಸುದೀಪ್‌ಗೆ ಥಳಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ಸುದೀಪ್‌ ಪಾಂಗೆಯನ್ನು ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ.

ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೊಪಿಸಿ ರಾಜು ಮಾಳಿ, ವಿಜಯ್‌ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ವಿರುದ್ಧ ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
div class="ere-sticky">