Home Crime Crime News: ಬೇರೆ ಡಾಕ್ಟರ್‌ ಜೊತೆ ಲವ್‌…? ಅಕ್ಕನ ಮರ್ಡರ್‌ ಮಾಡಿದ ಬಾವನ ಕುಕೃತ್ಯ ಬಿಚ್ಚಿಟ್ಟ...

Crime News: ಬೇರೆ ಡಾಕ್ಟರ್‌ ಜೊತೆ ಲವ್‌…? ಅಕ್ಕನ ಮರ್ಡರ್‌ ಮಾಡಿದ ಬಾವನ ಕುಕೃತ್ಯ ಬಿಚ್ಚಿಟ್ಟ ನಾದಿನಿ

Hindu neighbor gifts plot of land

Hindu neighbour gifts land to Muslim journalist

Crime News: ವೈದ್ಯ ಡಾ.ಮಹೇಂದ್ರ ರೆಡ್ಡಿ ಎಂಬಾತ ತನ್ನ ಪತ್ನಿಯನ್ನು ಇಂಜೆಕ್ಷನ್‌ ನೀಡಿ ಕೊಲೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕೃತಿಕಾ ಸಹೋದರಿ ಡಾ.ನಿಖಿತಾ ಅವರು ಮಾಧ್ಯಮದ ಜೊತೆ ಮಾತನಾಡಿದ್ದು, ಅಕ್ಕನ ಸಾವಿಗೆ ಪತಿ ಮಹೇಂದ್ರನೇ ಕಾರಣ. ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಆರೋಪ ಮಾಡಿದ್ದಾರೆ.

ಕೃತಿಕಾ ಮೃತಪಟ್ಟ ದಿನವೇ ನಮಗೆ ಅನುಮಾನವಿತ್ತು. ಪೋಸ್ಟ್‌ಮಾರ್ಟಂ ಮಾಡಬೇಕು ಎಂದು ನಾವು ಒತ್ತಾಯ ಮಾಡಿದ್ದೆವು. ಆದರೆ ಮಹೇಂದ್ರ ಪೋಸ್ಟ್‌ಮಾರ್ಟಂ ಬೇಡ ಎಂದು ನಾಟಕ ಮಾಡಿದರು. ನಂತರ ತನಿಖೆಯ ವೇಳೆ ಮಹೇಂದ್ರಗೆ ಅನೈತಿಕ ಸಂಬಂಧವಿತ್ತು ಎಂದು ಗೊತ್ತಾಯಿತು ಎಂದು ನಿಖಿತಾ ಹೇಳಿದ್ದಾರೆ.

ಕೃತಿಕಾಗೆ ಯಾವುದೇ ಅನಾರೋಗ್ಯ ಸಮಸ್ಯೆ ಇರಲಿಲ್ಲ. ನಾನು ಆಕೆಯ ಅಕ್ಕ. ನನಗೆ ಎಲ್ಲಾ ಗೊತ್ತು. ಮಹೇಂದ್ರನನ್ನು ಸ್ವಂತ ಮಗನ ರೀತಿ ನಮ್ಮ ಅಪ್ಪ ಅಮ್ಮ ನೋಡಿಕೊಳ್ಳುತ್ತಿದ್ದರು. ನಾವಿಬ್ಬರು ಹೆಣ್ಣು ಮಕ್ಕಳು ಆಗಿರುವುದರಿಂದ ಆತನನ್ನೇ ಮಗ ಎನ್ನುವ ರೀತಿ ನಡೆದುಕೊಳ್ಳುತ್ತಿದ್ದರು.

ಮೊದಲಿಗೆ ಕ್ಲಿನಿಕ್‌ ಮಾಡಿಕೊಡುವಂತೆ ಮಹೇಂದ್ರ ಒತ್ತಾಯ ಮಾಡಿದ್ದ. ಮದುವೆ ನಂತರ ಹಾಸ್ಪಿಟಲ್‌ ಮಾಡಿ ಕೊಡಿ ಎಂದಿದ್ದ. ಅಷ್ಟೆಲ್ಲ ಆಗಲ್ಲಪ್ಪ, ಕ್ಲಿನಿಕ್‌ ಮಾಡಿಕೊಡುತ್ತೇವೆ ಎಂದು ತಂದೆ ಹೇಳಿದ್ದರು. ಹಾಸ್ಪಿಟಲ್‌ ಮಾಡಿಕೊಟ್ಟಿಲ್ಲ ಎನ್ನುವ ಕಾರಣ ಕೂಡಾ ಇರಬಹುದು ಎಂದು ನಿಖಿತಾ ಹೇಳಿದ್ದಾರೆ.