ಕಳೆದ 2025 ರಲ್ಲಿ ಮೇಘಾಲಯಕ್ಕೆ ಹನಿಮೂನ್‌ಗೆ ಬಂದಿದ್ದ ತನ್ನ ಪತಿ ರಾಜಾ ರಘುವಂಶಿಯನ್ನು ಸುಪಾಲಿ ಕೊಲೆಗಾರರ ಮೂಲಕ ಕಂದಕಕ್ಕೆ ತಳ್ಳಿ ಕೊಲೆ ಮಾಡಿದ ಪ್ರಕರಣಕ್ಕೆ ದೊಡ್ಡ ತಿರುವು ದೊರಕಿದೆ. ಈ ಹತ್ಯೆಯ ಪ್ರಮುಖ ಆರೋಪಿ ಸೋನಮ್ ರಘುವಂಶಿಗೆ ಮೇಘಾಲಯ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನೆ ಮಾಡಿ ಮೇಘಾಲಯ ಸರಕಾರ ಹಾಗೂ ಮೃತನ ಕುಟುಂಬ ಸುಪ್ರೀಂ ಕೋರ್ಟ್‌ಗೆ ತುರ್ತು ಮೇಲ್ಮನವಿ ಸಲ್ಲಿಸಿದೆ.
Sponsoredಸರಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಹೈಕೋರ್ಟ್ ಆರೋಪಿಗೆ ಜಾಮೀನು ನೀಡುವಲ್ಲಿ ಗಂಭೀರ ತಪ್ಪು ಮಾಡಿದೆ ಎಂದು ವಾದ ಮಾಡಿದರು. ಸೋನಮ್‌ನನ್ನು ಬಂಧನ ಮಾಡುವ ಸಮಯದಲ್ಲಿ ಪೊಲೀಸರು ಲಿಖಿತ ಕಾರಣಗಳನ್ನು ಸರಿಯಾಗಿ ಒದಗಿಸಿಲ್ಲ ಎನ್ನುವ ಕಾರಣಕ್ಕೆ ಹೈಕೋರ್ಟ್ ಜಾಮೀನು ಎತ್ತಿ ಹಿಡಿದಿದೆ. ಅಪರಾಧ ಮಾಡಿರುವ ಆರೋಪಿ ಜಾಮೀನಿನ ಮೇಲಿರುವುದರಿಂದ ದೇಶ ಬಿಟ್ಟು ಪರಾರಿಯಾಗುವ ಸಾಧ್ಯತೆಯಿದೆ ಎಂದು ವಾದಿಸಿ, ತಕ್ಷಣವೇ ಜಾಮೀನು ರದ್ದು ಮಾಡಲು ಕೋರಿದರು. ಈ ಅರ್ಜಿಯನ್ನು ಒಪ್ಪಿದ ಪೀಠವು ಶುಕ್ರವಾರ ತುರ್ತು ವಿಚಾರಣೆಗೆ ಪಟ್ಟಿ ಮಾಡಿದೆ.



